Thursday, February 18, 2021

Ratha Saptami

                                                      Lord Surya / Sun God / Bhagavan
 

🌞 ☀️ "ರಥಸಪ್ತಮಿ" ☀️ 🌞


Ratha Saptami Muhurata Or Timings

Ratha Saptami on Friday, February 19, 2021


Snana Muhurata on Ratha Saptami -Day – between 05:03 AM to 06:40 AM

Duration - 01 Hour 38 Minutes

Main timing for Ratha Saptami - 06:19 AM

 

Observing or Viewing Sun time on Ratha Saptami day - 06:40 AM

Saptami Tithi Begins - 08:17 AM on Feb 18, 2021

Saptami Tithi Ends - 10:58 AM on Feb 19, 2021

 

                                                                        Pic1


🕉️ ರಥ ಸಪ್ತಮಿ ಮಹತ್ವ ಮತ್ತು ಪೌರಾಣಿಕ ಹಿನ್ನೆಲೆ 🕉



🌞🌺ಬಾಲ್ಯದಲ್ಲಿ ಅಜ್ಜಿ ಪಾಡ್ಯ, ಬಿದಿಗೆ, ತದಿಗೆ... ಅಮಾವಾಸ್ಯೆಯವರೆಗೆ ಕಂಠಪಾಠ ಮಾಡಿಸುವಾಗ ಒಂದೊಂದು ತಿಥಿಗೂ ಒಂದೊಂದು ಹಬ್ಬವನ್ನು ಸೇರಿಸಿ ಹೇಳಿಕೊಡುತ್ತಿದ್ದರು.

🌞🌺
ಪಾಡ್ಯ- ಉಗಾದಿ ಪಾಡ್ಯ, ಬಿದಿಗೆ-ಭಾನು ಬಿದಿಗೆ, ತದಿಗೆ-ಅಕ್ಷ ತದಿಗೆ, ಚೌತಿ-ವಿನಾಯಕನ ಚೌತಿ. . . . ಹೀಗೆ ‘ಸಪ್ತಮಿ’ಯ ಸರದಿ ಬಂದಾಗ ರಥಸಪ್ತಮಿ ಸೇರಿಕೊಳ್ಳುತ್ತಿತ್ತು.

🌞🌺
ಸಮಯ ಸಿಕ್ಕಾಗಲೆಲ್ಲ ಹಬ್ಬಗಳ ಮಹತ್ವದ ಬಗ್ಗೆ ವಿವರಿಸುತ್ತಿದ್ದರು.ಹಬ್ಬಗಳು ಪ್ರತಿವರ್ಷ ಬರುತ್ತವೆ, ಹೋಗುತ್ತವೆ. ಆದರೆ ಅವುಗಳ ಆಚರಣೆಯ ಹಿಂದಿನ ಗೂಢಾರ್ಥ, ವೈಜ್ಞಾನಿಕ ಅಂಶಗಳನ್ನು ಅರಿತಾಗ ಅರ್ಥಪೂರ್ಣ ಆಚರಣೆಯಾಗುತ್ತದೆ.

🌞🌺
ಯುಗಾದಿ ಹೊಸತನವನ್ನು ಹೊತ್ತು ತಂದರೆ, ಅದಕ್ಕೂ ಮುನ್ನ ಬರುವ ರಥಸಪ್ತಮಿ ಹಳತರ ಜಾಗದಲ್ಲಿ ಹೊಸತನ್ನು ತಂದಿಟ್ಟು ಬದುಕನ್ನು ಆನಂದಮಯವಾಗಿಸಿಕೊಳ್ಳಲು ಪ್ರೇರೇಪಿಸುತ್ತದೆ.

🌞🌺 “
ಮಾಘ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿಯಂದು ದಿನ ಸೂರ್ಯ ಹಳೆಯ ರಥವನ್ನು ಬಿಟ್ಟು ಹೊಸ ರಥ ಹತ್ತುತ್ತಾನಂತೆ” ಅಂತ ಅಜ್ಜಿ ಹೇಳುತ್ತಿದ್ದುದು ನೆನಪಾಗುತ್ತದೆ.

🌞🌺
ಅಲ್ಲದೆ ಈ ದಿನವನ್ನು ಸೂರ್ಯನ ಜನ್ಮದಿನವೆಂದೂ ಪ್ರಾಜ್ಞರು ಹೇಳುತ್ತಾರೆ.

🌞🌺
ಯಾವುದೇ ವಸ್ತು ಹಳೆಯದಾದ ಮಾತ್ರಕ್ಕೆ ಬದುಕು ಹಳತಾಗದು. ಅದು ನಿತ್ಯ ನವೀನ.

🌞🌺
ಹೀಗಾಗಿಯೇ ದೇಹ ಹಳತಾದಂತೆ ಹಳೆಯ ಬಟ್ಟಿ ಕಳಚಿ ಹೊಸದನ್ನು ಧರಿಸಿದಂತೆ ಅದನ್ನು ವಿಸರ್ಜಿಸಿ ಆತ್ಮ ಹೊಸತನ್ನು ಪಡೆಯುತ್ತದೆ ಎಂಬ ನಂಬಿಕೆಯಿದೆ.

🌞🌺
ಸೂರ್ಯನೂ ಹಾಗೆಯೇ, ಪ್ರತಿವರ್ಷ ರಥ ಬದಲಿಸಿ ತನ್ನ ಕಾರ್ಯವನ್ನು ಚುರುಕುಗೊಳಿಸುತ್ತಾನೆ.

🌞🌺
ತನ್ಮೂಲಕ ಭುವಿಯ ನಿವಾಸಿಗಳಿಗೆ ಚೈತನ್ಯ ನೀಡುತ್ತಾನೆ.

🌞🌺
ಈ ಹಿನ್ನೆಲೆಯಲ್ಲಿ ಆತನನ್ನು ಗೌರವಿಸುವ ಸಲುವಾಗಿ ನಾಳೆ (ಮಾಘ ಮಾಸ, ಶುಕ್ಲಪಕ್ಷದ ಸಪ್ತಮಿ ತಿಥಿ-ಗುರುವಾರ) ದೇಶಾದ್ಯಂತ ರಥಸಪ್ತಮಿ ಆಚರಿಸಲಾಗುತ್ತಿದೆ.

ಆರೋಗ್ಯಂ ಭಾಸ್ಕರಾದಿಚ್ಛೇತ್...

🌞🌺
ಚಳಿಗಾಲದಲ್ಲಿ ಮುದುಡುವ ಶರೀರ, ರಥಸಪ್ತಮಿಯ ಬಳಿಕ ಸೂರ್ಯನ ಶಾಖದಿಂದಾಗಿ ನವಚೈತನ್ಯ ತುಂಬಿಕೊಳ್ಳುತ್ತದೆ. ‘

🌞🌺
ಆರೋಗ್ಯಂ ಭಾಸ್ಕರಾದಿಚ್ಛೇತ್’ ಅಂದರೆ ಸೂರ್ಯ ಆರೋಗ್ಯದಾಯಿ. ವೈಜ್ಞಾನಿಕವಾಗಿಯಯೂ ಇದು ಸಾಬೀತಾಗಿದೆ.

🌞🌺
ಹಸುಗೂಸಿನ ಕಣ್ಣುಗಳು ಸಾಮಾನ್ಯವಾಗಿ ಹಳದಿ ಬಣ್ಣಕ್ಕೆ ತಿರುಗಿದ ಸಂದರ್ಭದಲ್ಲಿ ಪ್ರತಿದಿನ ಎಳೆಬಿಸಿಲಿಗೆ ಮಗುವನ್ನು ಮಲಗಿಸುವಂತೆ ವೈದ್ಯರು ಸಲಹೆ ನೀಡುತ್ತಾರೆ.

🌞🌺
ಚಂದ್ರನ ಬೆಳಕಿನಲ್ಲಿ ವಿಟಮಿನ್ ‘ಬಿ 12’ ಇದ್ದರೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ‘ಡಿ’ ಹೇರಳವಾಗಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

🌞🌺
ಹೀಗಾಗಿಯೇ ಪ್ರತ್ಯಕ್ಷವಾಗಿ ಕಾಣುವ ದೈವಸ್ವರೂಪಿ ಸೂರ್ಯನ ಆರಾಧನೆಗೆ ವಿಗ್ರಹಾರಾಧ ನೆ ಬಳಕೆಗೆ ಬರುವ ಮುಂಚಿನಿಂದಲೂ ಪ್ರಾಶಸ್ತ್ಯವಿದೆ.

🌞🌺
ಆಹಾರಕ್ಕಾಗಿ, ರೋಗ ನಿವಾರಣೆಗಾಗಿ ಸೂರ್ಯೋಪಾಸನೆ ಮಾಡಬೇಕೆಂದು ಸ್ಕಂದ, ವರಾಹ ಪುರಾಣಗಳಲ್ಲಿಯೂ ಹೇಳಲಾಗಿದೆ.

🌞🌺
ರೋಗ ನಿವಾರಣೆ, ದೇಹದಾರ್ಡ್ಯ ಹಾಗೂ ಆರೋಗ್ಯವನ್ನು ಬಯಸುವವರು ಸೂರ್ಯನ ಆರಾಧನೆ ಮಾಡಬೇಕೆಂಬ ನಿಯಮವಿದೆ.

🌞🌺
ರೋಗಾಣುಗಳನ್ನು ನಾಶ ಪಡಿಸುವ ಶಕ್ತಿ ಸೂರ್ಯನ ಕಿರಣಗಳಲ್ಲಿವೆ. ಬೆಳಗಿನ ಹಾಗೂ ಸಂಜೆಯ ಸೂರ್ಯ ಕಿರಣಗಳಿಂದ ಆರೋಗ್ಯ ವರ್ಧನೆಯಾಗುತ್ತದೆ.

🌞🌺
ರೋಗದಿಂದ ನರಳುವವರು ರಥಸಪ್ತಮಿಯ ದಿನದಿಂದಲಾದರೂ ಸೂರ್ಯಾರಾಧನೆಯನ್ನು ಮಾಡಿದರೆ ಅರ್ಥಾತ್ ಆತನ ಕಿರಣಗಳಿಗೆ ಸೂಕ್ತ ವೇಳೆಯಲ್ಲಿ ಮೈಯೊಡ್ಡಿದರೆ ಬೇಗ ಗುಣಹೊಂದುತ್ತಾರೆ ಎಂಬುದು ವೈಜ್ಞಾನಿಕವಾಗಿ ಸಾಬೀತಾಗಿದೆ.

🌞🌺
ಸೂರ್ಯರಾಧನೆಯನ್ನು ಮುಖ್ಯವಾಗಿ ಭಾರತ, ಮಧ್ಯ ಆಫ್ರಿಕಾ, ಈಜಿಪ್ಟ್‌, ಗ್ರೀಸ್ ಹಾಗೂ ಮಧ್ಯ ಏಷ್ಯಾಗಳಲ್ಲಿ ಆಚರಿಸಲಾಗುತ್ತಿದೆ.

🌞🌺108
ಸೂರ್ಯ ನಮಸ್ಕಾರ ಯೋಗಾಸನಗಳಲ್ಲಿ ಮೊದಲ ಪ್ರಾಶಸ್ತ್ಯ ಸೂರ್ಯನಮಸ್ಕಾರಕ್ಕಿದೆ.

🌞🌺
ಏಕೆಂದರೆ ಈ ಅಭ್ಯಾಸವು ಮನಸ್ಸು, ದೇಹ ಮತ್ತು ಉಸಿರಾಟ ವ್ಯವಸ್ಥೆಗಳಿಗೆ ವಿಶೇಷವಾಗಿ ಪರಿಣಾಮಕಾರಿಯಾಗಿದೆ.

🌞🌺
ಭೂಮಿಯಲ್ಲಿನ ಸಕಲ ಜೀವರಾಶಿಗಳ ಚಟುವಟಿಕೆಗಳ ಸೂರ್ಯನಿಂದ ನಡೆಯುತ್ತಿದೆ. ಸೂರ್ಯನಿಲ್ಲದೆ ಜೀವನ ಅಸ್ತಿತ್ವ ಇರಲು ಸಾಧ್ಯವಿಲ್ಲ.

🌞🌺
ಹೀಗಾಗಿ ರಥಸಪ್ತಮಿಯಂದು 108 ಸೂರ್ಯ ನಮಸ್ಕಾರಗಳು ಹಾಗೂ ಸಪ್ತಾಶ್ವಗಳ ಪ್ರತೀಕವಾಗಿ ಸಪ್ತ ನಮಸ್ಕಾರಗಳನ್ನು ಮಾಡುವ ಅಭ್ಯಾಸವಿದೆ.

 

                                                                             Pic2
       


ಪೌರಾಣಿಕ ಹಿನ್ನೆಲೆಯೇನು?



🌞🌺
ದ್ವಾಪರ ಯುಗದಲ್ಲಿ ಶ್ರೀ ಕೃಷ್ಣನು ಧರ್ಮರಾಜನಿಗೆ ರಥಸಪ್ತಮಿ ಬಗ್ಗೆ ಹೇಳಿದ ಕಥೆಯಿದೆ.

🌞🌺
ಯಶೋವರ್ಮನೆಂಬ ರಾಜನಿಗೆ ಹುಟ್ಟಿದ ಮಗನಿಗೆ ಹುಟ್ಟಿನಿಂದಲೇ ರೋಗಿಷ್ಠನಾಗಿದ್ದ.

🌞🌺
ಈ ಬಗ್ಗೆ ಜ್ಯೋತಿಷಿಗಳಿಂದ ಮಾಹಿತಿ ಪಡೆದು ಸಂಚಿತಕರ್ಮದಿಂದ ಬಂದಿರುವ ಕಾಯಿಲೆಗೆ ರಥಸಪ್ತಮಿ ವ್ರತ ಚರಿಸಲು ಹೇಳಿದ್ದರು.

🌞🌺
ಅದರಂತೆ ಅಂದು ಸೂರ್ಯಾರಾಧನೆ ಮಾಡಲಾಗಿ ರಾಜ ಪುತ್ರನು ಆರೋಗ್ಯವಂತನೂ, ಪ್ರಭಾವಶಾಲಿಯೂ ಆದನು.

🌞🌺
ಅಲ್ಲದೆ ಪಾಂಡವರು ವನವಾಸದ ಅವಧಿಯಲ್ಲಿ ಶ್ರೀಕೃಷ್ಣನ ಆದೇಶದಂತೆ ಸೂರ್ಯಾರಾಧನೆ ಮಾಡಿ ಆತನಿಂದ ಅಕ್ಷಯ ಪಾತ್ರೆ ಪಡೆದಿದ್ದರು.

🌞🌺
ಅಲ್ಲದೆ ರಾವಣನ್ನು ಗೆಲ್ಲಬೇಕಾದರೆ ಶ್ರೀರಾಮನೂ ಕೂಡ ಅಗಸ್ತ್ಯರ ಉಪದೇಶದಂತೆ ಆದಿತ್ಯಹೃದಯದ ಮೂಲಕ ಸೂರ್ಯನ ಆರಾಧನೆ ಮಾಡಿದನೆಂದು ರಾಮಾಯಣದಲ್ಲಿ ಹೇಳಿದೆ.

🌞🌺
ಸೂರ್ಯಾರಾಧನೆ ಮಾಡಿ, ಚಿನ್ನ ನೀಡುವ ಶಮಂತಕಮಣಿ ಪಡೆದ ಸತ್ರಾಜಿತನ ಕಥೆ ಹರಿವಂಶದಲ್ಲಿ ಬಂದಿದೆ.

🌞🌺
ಮಯೂರನೆಂಬ ಕವಿ ಸೂರ್ಯಶತಕವೆಂಬ ಗ್ರಂಥ ಬರೆದು ಕಳೆದುಕೊಂಡ ಕಣ್ಣನ್ನು ಮತ್ತೆ ಪಡೆದನೆಂದು ಹೇಳುತ್ತಾರೆ.

🌞🌺
ಶ್ರೀರಾಮ ಸೂರ್ಯವಂಶದವನಾದರೆ ಕರ್ಣ, ಸುಗ್ರೀವ, ನವಗ್ರಹಗಳಲ್ಲಿ ಶನಿ ಹಾಗೂ ಯಮ ಸೂರ್ಯನ ಪುತ್ರರಾಗಿದ್ದಾರೆ.

🌞🌺
ರಥಸಪ್ತಮಿಯಂದು ಸೂರ್ಯೋದಯಕ್ಕೆ ಸರಿಯಾಗಿ ನದಿ, ಸಮುದ್ರ, ಸರೋವರ, ಸಂಗಮ ಮುಂತಾದೆಡೆ ಸ್ನಾನ ಮಾಡಿ ಸೂರ್ಯನಿಗೆ ಅರ್ಘ್ಯ ನೀಡಿದರೆ ಪೂರ್ವ ಜನ್ಮದ ಪಾಪಗಳು ಹಾಗೂ ಈ ಜನ್ಮದ ಸಕಲ ದುಃಖಗಳು ಪರಿಹಾರವಾಗುತ್ತವೆ.

🌞🌺
ಸೂರ್ಯೋದಯಕ್ಕೆ ಮಾಡುವ ಮಾಘಸ್ನಾನ ತುಂಬಾ ಪುಣ್ಯಪ್ರದವಾದುದು. ಆಯುಷ್ಯ, ಆರೋಗ್ಯಸಂಪತ್ತು ಲಭಿಸುವುದಲ್ಲದೇ, ಸೂರ್ಯನ ಅನುಗ್ರಹ ಪ್ರಾಪ್ತಿಯಾಗುತ್ತದೆಂದು ಪುರಾಣಗಳು ಸಾರಿ ಸಾರಿ ಹೇಳುತ್ತಿವೆ.

🌞🌺
ಸೂರ್ಯನ ಆರಾಧನೆ ಋಗ್ವೇದದ ಕಾಲದಿಂದಲೂ ಪ್ರಚಲಿತದಲ್ಲಿದೆ.

🌞🌺
ಪ್ರಾಚೀನ ವೈದಿಕ ಧರ್ಮದಲ್ಲಿ ಸೂರ್ಯನಿಗೆ ಅತ್ಯಂತ ಪ್ರಾಮುಖ್ಯತೆ ಇತ್ತು. ಆತನ ಆರಾಧನೆಯಿಂದಲೇ ಸೌರ ಪಂಥ ಹುಟ್ಟಿದ್ದು. ಕಾಲ ಗಣನೆಯಲ್ಲಿ ಸೌರಮಾನ ಎಣಿಕೆ ಇಂದಿಗೂ ಇದೆ.

🌞🌺
ಇನ್ನು, ‘ಭೂರ್ಭುವಸ್ವಃ'. . . ಎಂಬಮಂತ್ರದಲ್ಲಿ ಗಾಯತ್ರಿ ಮಂತ್ರದಲ್ಲಿನ ಪ್ರತಿಶಬ್ದವು ಸೂರ್ಯನ ಸಾಮರ್ಥ್ಯಗಳನ್ನು ಕೊಂಡಾಡುತ್ತದೆ.

🌞🌺
ಎಕ್ಕದೆಲೆಯ ಸ್ನಾನ ಸೂರ್ಯನ ಕಿರಣಗಳಲ್ಲಿನ ಸತ್ವಗಳನ್ನು ಹೀರಿಕೊಂಡಿರುವ ಅರ್ಕದೆಲೆ ಅಥವಾ ಎಕ್ಕದೆಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲಿರಿಸಿ ಸ್ನಾನ ಮಾಡುವುದು ರಥಸಪ್ತಮಿಯ ವಿಶೇಷತೆಗಳಲ್ಲೊಂದು.

🌞🌺
ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ.

🌞🌺
ಹೀಗಾಗಿಯೇ ಈ ದಿನ ಎಕ್ಕದೆಲೆಯ ಸ್ನಾನಕ್ಕೆ ಮಹತ್ವ ನೀಡಲಾಗಿದೆ.

🌞🌺
ದೇವರೆಲ್ಲಿದ್ದಾನೆ ಎಂದು ಪ್ರಶ್ನಿಸುವ ಬದಲು ಪ್ರತ್ಯಕ್ಷವಾಗಿ ಕಾಣುವ ದೈವೀ ಸ್ವರೂಪಗಳಾದ, ಯಾವುದೇ ಜಾತಿಭೇದ, ಧರ್ಮದ ಚೌಕಟ್ಟಿಲ್ಲದ ಸೂರ್ಯ, ಚಂದ್ರ, ವೃಕ್ಷ, ಬೆಟ್ಟ, ನದೀನದಗಳ ಆರಾಧನೆಯನ್ನು ನಮ್ಮ ಪೂರ್ವಿಕರು ಆಚರಣೆಗೆ ತಂದಿರುವುದು ಎಷ್ಟೊಂದು ಅರ್ಥಪೂರ್ಣವಾಗಿದೆಯಲ್ಲವ?

*
ಸಪ್ತ ಸಪ್ತ ಮಹಾಸಪ್ತ
ಸಪ್ತ ದ್ವೀಪ ವಸುಂಧರ*

*
ಸಪ್ತಾರ್ಕ ಪ್ರಣಮಾಧ್ಯಾಯ
ಸಪ್ತಮಿ ರಥ ಸಪ್ತಮಿ*

ಎಂದು ಈ ಶ್ಲೋಕವನ್ನು ಹೇಳಿಕೊಂಡು ತಲೆಗೆ ಸ್ನಾನ ಮಾಡಿದರೆ ಓಳ್ಳಯದು

ಈ ಮೇಲಿನ ಎಲ್ಲಾ ಸಂಗತಿಗಳನ್ನು ಓದಿ, ನಿಮ್ಮ ಕುಟುಂಬ, ಬಂದು, ಬಳಗ, ಮತ್ತು ವಿಶೇಷ ವಾಗಿ ಇಂದಿನ ಮಕ್ಕಳಿಗೆ ಮನವರಿಕೆ ಮಾಡಿ.


ನಮ್ಮ ಸಂಸ್ಕೃತಿ ಉಳಿಸಲು ನಿಮ್ಮ ಕೊಡುಗೆ ಇರಲಿ.


                                                                             Pic3                                                 


                                                             ----------- Hari Om -----------








 

 

 

No comments:

Post a Comment